ಉಡುಪಿ: ಭಗವಂತನ ಅನುಗ್ರಹದಿಂದ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದೆ. ಹಲವಾರು ಜಿಲ್ಲೆಯಲ್ಲಿ ಪಾಸಿಟಿವಿಟಿ ಶೂನ್ಯ ಪ್ರಮಾಣದಲ್ಲಿದೆ. ಹೀಗಾಗಿ ತಜ್ಞರ ಅಭಿಪ್ರಾಯದಂತೆ ದಸರಾ ಮುಗಿದ ತಕ್ಷಣವೇ ಶಾಲೆಗಳು ಆರಂಭಿಸುತ್ತೇವೆ. ಜತೆಗೆ ದಸರಾ ಮುಗಿದ ತಕ್ಷಣ ಬಿಸಿಯೂಟ ಆರಂಭವಾಗಲಿದೆ. ಆಯಾ ಜಿಲ್ಲೆಯ ಅಧಿಕಾರಿಗಳು ಎಲ್ಲಾ ವ್ಯವಸ್ಥೆಗಳನ್ನು ಮಾಡಿದ್ದಾರೆ. ಎಲ್ಲರಿಗೂ ಶಾಲೆ ಕಡ್ಡಾಯ ಮಾಡಿಲ್ಲ, ಮುಂದೆಯೂ ಕಡ್ಡಾಯ ಮಾಡಲ್ಲ. ಆನ್ಲೈನ್ ಆಫ್ ಲೈನ್ ಎರಡು ಮಾದರಿಯಲ್ಲಿ ತರಗತಿಗಳು ನಡೆಯಲಿದೆ. ಈಗ ಆರಂಭವಾಗಿರುವ ಶಾಲೆಗಳ ಹಾಜರಾತಿ ತೃಪ್ತಿಕರವಾಗಿದೆ. ಆನ್ಲೈನ್ ತರಗತಿಯಿಂದ ಕೆಳ ಗ್ರಾಮೀಣ ಮಕ್ಕಳಿಗೆ ತೊಂದರೆಯಾಗಿದೆ. ಗ್ರಾಮೀಣ ಭಾಗದಲ್ಲಿ ಹೈಸ್ಕೂಲ್ ಮಕ್ಕಳ ಹಾಜರಾತಿ ಶೇ. 90ರಷ್ಟಿದೆ ಎಂದು ಅವರು ಮಾಹಿತಿ ನೀಡಿದರು.
Discussion about this post