ಹೃದಯಾಘಾತದಿಂದ ಶುಕ್ರವಾರ (ಅ.29) ನಿಧನರಾದ ಪುನೀತ್ ರಾಜ್ಕುಮಾರ್ ಅವರ ಸಮಾಧಿಗೆ ಕುಟುಂಬದವರು ಇಂದು (ನ.2) ಹಾಲು-ತುಪ್ಪ ಅರ್ಪಿಸುವ ಕಾರ್ಯ ಮಾಡುತ್ತಿದ್ದಾರೆ. ಬೆಳಗ್ಗೆ 11 ಗಂಟೆಗೆ ಈ ಕಾರ್ಯ ನಡೆಯಲಿದೆ. ಆದರೆ ಅಪ್ಪು ಸಮಾಧಿ ದರ್ಶನ ಮಾಡಲು ಅಭಿಮಾನಿಗಳಿಗೆ ಇನ್ನೂ ಅವಕಾಶ ಸಿಕ್ಕಿಲ್ಲ. ದೂರದೂರದ ಊರುಗಳಿಂದ ಅಪಾರ ಸಂಖ್ಯೆಯ ಜನರು ಬಂದು ಸಮಾಧಿ ದರ್ಶನಕ್ಕಾಗಿ ಕಾಯುತ್ತಿದ್ದಾರೆ. ‘ಇನ್ನು ಎರಡು ದಿನ ಕಾಯಿರಿ’ ಎಂದು ಅವರಿಗೆಲ್ಲ ಶಿವರಾಜ್ಕುಮಾರ್ ಮನವಿ ಮಾಡಿಕೊಂಡಿದ್ದಾರೆ.
‘ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಲೇ ಇದ್ದಾರೆ. ಆದರೆ ಸಮಾಧಿ ನೋಡಲು ಯಾರಿಗೂ ಈಗ ಅವಕಾಶ ಇಲ್ಲ. ಶೀಘ್ರವೇ ಅವಕಾಶ ಮಾಡಿಕೊಡುತ್ತೇವೆ. ಮಕ್ಕಳು ಮತ್ತು ಮನೆಯವರಿಂದ ಮಂಗಳವಾರ ಹಾಲು-ತುಪ್ಪ ಕಾರ್ಯ ಮಾಡಿಸಬೇಕು. ಅದೊಂದು ಕಾರ್ಯ ಮುಗಿಸಿದ ಬಳಿಕವೇ ಬೇರೆಯವರಿಗೆ ಅನುಮತಿ ನೀಡೋಣ ಅಂತ ತೀರ್ಮಾನಿಸಿದ್ದೇವೆ’ ಎಂದು ರಾಘಣ್ಣ ಹೇಳಿದ್ದರು.
Discussion about this post