ಹೊಸದಿಲ್ಲಿ: ಕಳೆದ 2019ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಸ್ಟಾರ್ ಬ್ಯಾಟ್ಸ್‌ಮನ್ ಎಬಿ ಡಿ ವಿಲಿಯರ್ಸ್ ಅವರನ್ನು ದಕ್ಷಿಣ ಆಫ್ರಿಕಾ ತಂಡಕ್ಕೆ ಆಯ್ಕೆ ಮಾಡದೆ ಇರಲು ಅಸಲಿ ಕಾರಣವೇನೆಂಬುದನ್ನು ಕ್ರಿಕೆಟ್ ದಕ್ಷಿಣ ಆಫ್ರಿಕಾ ಮಾಜಿ ಸೆಲೆಕ್ಟರ್ ಲಿಂಡಾ ಝೊಂಡಿ ಬಹಿರಂಗಪಡಿಸಿದ್ದಾರೆ.
ಇಂಗ್ಲೆಂಡ್ ಆತಿಥ್ಯದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಇನ್ನು ಒಂದು ವರ್ಷ ಬಾಕಿ ಇರುವಂತೆಯೇ ಎಬಿ ಡಿವಿಲಿಯರ್ಸ್ 2018ರ ಮೇ ತಿಂಗಳಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಹಠಾತ್ ವಿದಾಯ ಹೇಳಿದ್ದರು. ಆ ಮೂಲಕ ವಿಶ್ವ ಕ್ರಿಕೆಟ್‌ನಲ್ಲಿ ಅಚ್ಚರಿ ಮೂಡಿಸಿದ್ದರು.
ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವುದಕ್ಕೂ ಮುನ್ನ ಎಬಿ ಡಿವಿಲಿಯರ್ಸ್ ಹಲವು ದ್ವಿಕ್ಷೀಯ ಸರಣಿಗಳಲ್ಲಿ ಆಡಿರಲಿಲ್ಲ. ಅಷ್ಟೇ ಅಲ್ಲದೆ, 2018ರ ಜನವರಿಯಲ್ಲಿ ಭಾರತದ ವಿರುದ್ಧ ಕಣಕ್ಕೆ ಇಳಿಯುವುದಕ್ಕೂ ಮುನ್ನ ಹೆಚ್ಚು ಕಡಿಮೆ ಎರಡು ವರ್ಷಗಳ ಕಾಲ ಬಲಗೈ ಬ್ಯಾಟ್ಸ್‌ಮನ್ ಟೆಸ್ಟ್ ಕ್ರಿಕೆಟ್‌ನಿಂದ ದೂರ ಉಳಿದಿದ್ದರು.ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೂ ಮುನ್ನ ದಕ್ಷಿಣ ಆಫ್ರಿಕಾ ಮಾಜಿ ನಾಯಕ ಆಯ್ಕೆಗೆ ಲಭ್ಯರಾಗಿರುವುದಾಗಿ ಹೇಳಿದ್ದರು. ಆದರೆ, ಇದರಿಂದ ನಿಯಮಿತವಾಗಿ ಆಡುತ್ತಿರುವವರಿಗೆ ಅನ್ಯಾಯವಾಗಲಿದೆ ಎಂಬ ಉದ್ದೇಶದಿಂದ ಕ್ರಿಕೆಟ್ ದಕ್ಷಿಣ ಆಫ್ರಿಕಾ ಡಿವಿಲಿಯರ್ಸ್‌ಗೆ ಅವಕಾಶ ನೀಡಿರಲಿಲ್ಲ.
ಮುಂಬೈನ ಅಪಾರ್ಟ್ಮೆಂಟ್ನಲ್ಲಿ ಭಾರೀ ಅಗ್ನಿ ಅವಘಡ; ಬೆಂಕಿಯಲ್ಲಿ ಹಲವರು ಸಿಲುಕಿರುವ ಶಂಕೆ
Discussion about this post