ಕೊಡಗು: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಏಕಾಏಕಿ ಹೆಚ್ಚಳವಾಗುತ್ತಿದ್ದು, ಸಾಕಷ್ಟು ಆತಂಕ ಸೃಷ್ಟಿಸಿದೆ. ಇದರ ಜೊತೆ ಕೋವಿಡ್ ರೂಪಾಂತರಿ ತಳಿ ಒಮಿಕ್ರಾನ್ ಭೀತಿಯೂ ಹೆಚ್ಚಾಗುತ್ತಿದ್ದು, ರಾಜ್ಯದ ಇನ್ನೊಂದು ಶಾಲೆಯಲ್ಲಿ ಕೊರೋನಾ ಸ್ಫೋಟಗೊಂಡಿದೆ.
ಮಡಿಕೇರಿಯ ಸಂತ ಜೋಸೆಫ್ ಶಾಲೆಯ 10 ವಿದ್ಯಾರ್ಥಿಗಳಿಗೆ ಕೊರೋನಾ ಸೋಕು ತಗುಲಿರೋದು ಖಾತ್ರಿಯಾಗಿದೆ.
9ನೇ ತರಗತಿಯ 58 ವಿದ್ಯಾರ್ಥಿಗಳಲ್ಲಿ 10 ಮಕ್ಕಳಿಗೆ ಪಾಸಿಟಿವ್ ಬಂದಿದ್ದು, ಪೋಷಕರಲ್ಲಿ ಆತಂಕ ಸೃಷ್ಟಿಸಿದೆ. ಇನ್ನು ಶಾಲೆಯ ಉಳಿದ ವಿದ್ಯಾರ್ಥಿಗಳಿಗೆ ಇಂದು ಕೋವಿಡ್ ಟೆಸ್ಟ್ ನಡೆಸಲಾಗುತ್ತಿದೆ.
ಈಗಾಗಲೇ ಶಾಲೆಯ 20 ಸಿಬ್ಬಂದಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ವರದಿ ಬರಬೇಕಿದೆ. ಮುಂದೆ ಮತ್ತಷ್ಟು ಪಾಸಿಟಿವ್ ಬಂದರೆ ಶಾಲೆ ಬಂದ್ ಮಾಡುವ ಬಗ್ಗೆ ಚಿಂತನೆ ನಡೆಸಲಾಗುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ತಿಳಿಸಿದ್ದಾರೆ.
Discussion about this post