ಅಹಮದಾಬಾದ್: ಪ್ರಯಾಣಿಕರಿದ್ದ ವ್ಯಾನ್‌ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಅಹಮದಾಬಾದ್ ಜಿಲ್ಲೆಯ ವಲಾನಾ ಹಳ್ಳಿ ಬಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಟಮನ್-ಭಾವನಗರ ಸಂಪರ್ಕಿಸುವ ರಸ್ತೆಯಲ್ಲಿ ಬೆಳಗಿನ ಜಾವ 5 ಗಂಟೆಗೆ ಈ ಅಪಘಾತ ಸಂಭವಿಸಿದೆ.
‘8 ಮಂದಿ ಆನಂದ್ ಜಿಲ್ಲೆಯ ಖಾಂಬಟ್‌ನಿಂದ ವ್ಯಾನ್‌ನಲ್ಲಿ ತೆರಳುತ್ತಿದ್ದರು. ವಲಾನಾ ಹಳ್ಳಿಯ ಬಳಿ ಅಚಾನಕ್ಕಾಗಿ ವ್ಯಾನ್ ಪಕ್ಕಕ್ಕೆ ಚಲಿಸಿದ್ದು, ಈ ಸಂದರ್ಭ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, ತೀವ್ರವಾಗಿ ಗಾಯಗೊಂಡಿದ್ದ ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅಸುನೀಗಿದ್ದಾರೆ. ಮೂವರು ಗಾಯಗೊಂಡಿದ್ದಾರೆ’ ಎಂದು ಕೋಥ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
ಭೀಕರ ಅಪಘಾತವಾದ್ದರಿಂದ ಮೃತದೇಹಗಳನ್ನು ಹೊರತೆಗೆಯಲು ಗಂಟೆಗಳ ಕಾಲ ಸಮಯ ತೆಗೆದುಕೊಂಡಿದೆ. ಮೃತರಲ್ಲಿ ಇಬ್ಬರು ಮಹಿಳೆಯರಿದ್ದು, ಗಾಯಾಳುಗಳು ಖಾಂಬಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Discussion about this post