ಕಲಬುರಗಿ: ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ, ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕಲಬುರಗಿಯ ಪಂಚಶೀಲ ನಗರದಲ್ಲಿ ನಡೆದಿದೆ. 27 ವರ್ಷದ ದೀಕ್ಷಾ ಶರ್ಮಾ ಕುಕೃತ್ಯ ಎಸಗಿದ ಮಹಿಳೆ. ದೀಕ್ಷಾರ ಎರಡು ವರ್ಷದ ಪುತ್ರಿ ಸಿಂಚನಾ ತಾಯಿಯೊಂದಿಗೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಇನ್ನು 4 ವರ್ಷದ ಪುತ್ರ ಧನಂಜಯ್ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಪತಿಯ ಅಕ್ರಮ ಸಂಬಂಧದಿಂದ ಬೇಸತ್ತು ದೀಕ್ಷಾ ಈ ಕುಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ. ದೀಕ್ಷಾ ಅತ್ತೆ ಕೂಡ ದೀಕ್ಷಾ ಮೇಲೆ ಕಳ್ಳತನ ಆರೋಪ ಹೊರೆಸಿದ್ದರು ಎಂದು ತಿಳಿದುಬಂದಿದೆ. ಮಕ್ಕಳಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ದೀಕ್ಷಾ. ದೀಕ್ಷಾ ಮತ್ತು ಸಿಂಚನಾ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಪುತ್ರ ಧನಂಜಯ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಕಲಬುರಗಿ ನದರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪತಿಯ ಅಕ್ರಮ ಸಂಬಂಧದಿಂದ ಬೇಸತ್ತು ದೀಕ್ಷಾ ಈ ಕುಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ. ದೀಕ್ಷಾ ಅತ್ತೆ ಕೂಡ ದೀಕ್ಷಾ ಮೇಲೆ ಕಳ್ಳತನ ಆರೋಪ ಹೊರೆಸಿದ್ದರು ಎಂದು ತಿಳಿದುಬಂದಿದೆ. ಮಕ್ಕಳಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ದೀಕ್ಷಾ. ದೀಕ್ಷಾ ಮತ್ತು ಸಿಂಚನಾ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಪುತ್ರ ಧನಂಜಯ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಕಲಬುರಗಿ ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ :
ಚಾಮುಂಡೇಶ್ವರಿಯಲ್ಲಿ HDK ಪದೇ ಪದೇ ಸಂಚಾರ..! ಸಾರಾ ಮಹೇಶ್ ಗೈರಾಗುತ್ತಿರೋದು ಯಾಕೆ..?
Discussion about this post