ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವಿಧಿವಶರಾಗಿದ್ದು, ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಲಕ್ಷಾಂತರ ಅಭಿಮಾನಿಗಳು ದರ್ಶನ ಪಡೆಯುತ್ತಿದ್ದಾರೆ.
ನಾಳೆ ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನೆರವೇರಿಸಲಾಗುವುದು.
ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಸಮಾಧಿಯ ಪಕ್ಕದಲ್ಲಿ ಭಾನುವಾರ ನಟ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನೆರವೇರಿಸಲಾಗುವುದು.
ವಿದೇಶದಿಂದ ಮಗಳು ದೃತಿ ಬಂದ ಬಳಿಕ ನಾಳೆ ಅಂತ್ಯಕ್ರಿಯೆ ನೆರವೇರಲಿದೆ. ಕುಟುಂಬದವರು ಮತ್ತು ಸರ್ಕಾರದ ತೀರ್ಮಾನದಂತೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಸಮಾಧಿಯ ಪಕ್ಕದಲ್ಲಿ ನಾಳೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎನ್ನಲಾಗಿದೆ.
Discussion about this post