ಶಿವಮೊಗ್ಗ: ಬೆಳಗಾವಿಯಲ್ಲಿ ಉದ್ದೇಶ ಪೂರ್ವಕವಾಗಿ ಗಲಭೆ ನಡೆದಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದರು. ಈ ಸಂಬಂಧ ಮಾತಾಡಿದ ಬಿ.ಎಸ್ ಯಡಿಯೂರಪ್ಪ, ಗಲಾಟೆಯ ಬಗ್ಗೆ ನಾಳೆ ವಿಧಾನ ಮಂಡಲದಲ್ಲಿ ಚರ್ಚೆಯಾಗುತ್ತೆ. ಸಿಎಂ, ಗೃಹ ಸಚಿವರು ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದಾರೆ.
ನಾನು ಅವರೊಂದಿಗೆ ಮಾತಾಡಿದ್ದೇನೆ ಎಂದರು.
ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಮಾಡಲಾಗಿದೆ. ಈ ಕೇಸ್ ಸಂಬಂಧ 23 ಮಂದಿ ಬಂಧಣವಾಗಿದೆ. ಇದರಲ್ಲಿ ಯಾರು ಶಾಮೀಲಾಗಿದ್ದಾರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
Discussion about this post