ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನ ವಿರೂಪಗೊಳಿಸಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಅಂತಾ ಸಿಎಂ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು.. ನಿನ್ನೆ ರಾತ್ರಿ ಬೆಳಗಾವಿಯಲ್ಲಿ ನಡೆದ ಪುಂಡಾಟವನ್ನ ನಾನು ಖಂಡಿಸುತ್ತೇನೆ.
ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಸರ್ಕಾರಿ ಆಸ್ತಿಪಾಸ್ತಿ ಹಾನಿ ಮಾಡಿದ, ಪೊಲೀಸ್ ವಾಹನ ಜಖಂ ಮಾಡಿದವರನ್ನು ಬಂಧಿಸಲಾಗಿದೆ ಅಂತಾ ಮಾಹಿತಿ ನೀಡಿದ್ದಾರೆ.
ರಾಷ್ಟ್ರ ಭಕ್ತರ ಪ್ರತಿಮೆಗಳಿಗೆ ಅಪಮಾನ ಪ್ರವೃತ್ತಿ ಸಹಿಸುವುದಿಲ್ಲ. ರಾಷ್ಟ್ರ ಭಕ್ತರ ಪ್ರತಿಮೆಗಳನ್ನು ಧ್ವಂಸ ಮಾಡುವುದು ಅಪರಾಧ. ನಾಡಿನ ಹಿರಿಯ, ದೇಶಭಕ್ತರ ಗೌರ ಉಳಿಸುವ ಕೆಲಸ ಮಾಡಬೇಕು. ಅವರಿಗೆ ಅಪಮಾನ ಮಾಡುವ ಮೂಲಕ ಸಮಾಜದ ಕ್ಷೋಭೆ ಉಂಟು ಮಾಡುವುದು ಸಹಿಸುವುದಿಲ್ಲ ಎಂದು ಗುಡುಗಿದ್ದಾರೆ.
Discussion about this post