ಯಾದಗಿರಿ: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಏಣಿಕೆಯ ಕಾರ್ಯ ಬಹುತೇಕ ಮುಗಿಯುವ ಹಂತಕ್ಕೆ ಬಂದಿದ್ದು ಈಗಾಗಲೇ ಕೆಲವು ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದೆ. ಅಪರೂವೆಂಬಂತೆ ಜಿಲ್ಲೆಯಲ್ಲಿ ಪುರಸಭೆಗೆ ಸ್ಪರ್ಧಿಸಿದ್ದ ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡುವ ಯುವಕ ಗೆಲುವಿನ ನಗೆ ಬೀರಿದ್ದಾರೆ.
ಜಿಲ್ಲೆಯ ಕಕ್ಕೇರಾ ಪುರಸಭೆಯ ವಾರ್ಡ್ ನಂಬರ್ 6 ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದ ಪರಶುರಾಮ್ ಎಲೆಕ್ಷನ್ನಲ್ಲಿ ವಿಜಯ ಪತಾಕೆ ಹಾರಿಸಿದ್ದಾರೆ. ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುವ ಯುವಕ ಈ ಚುನಾವಣೆಯಲ್ಲಿ ಗೆಲ್ಲುವ ಮೂಲಕ ರಾಜ್ಯಾದ್ಯಂತ ಅಚ್ಚರಿ ಮೂಡಿಸಿದ್ದಾರೆ.
ಮತದಾನ ಪ್ರಕ್ರಿಯೆ ಮುಗಿದ ಮರುಕ್ಷಣದಿಂದಲೇ ಎರಡೂ ಪಕ್ಷದ ಅಭ್ಯರ್ಥಿಗಳ ಬೆಂಬಲಿಗರ ನಡುವೆ ಮತದಾನ ಪ್ರಮಾಣ, ಜಾತಿವಾರು ಲೆಕ್ಕಾಚಾರ, ಸೇರಿದಂತೆ ವಿವಿಧ ವಿಷಯಗಳು ಸಾರ್ವಜನಿಕ ಮತ್ತು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿತ್ತು. ಈ ನಡುವೆಯೇ ಕ್ಷೇತ್ರದ ಮತದಾದರು ಬಂಕ್ ಯುವಕನ ಕೈಹಿಡಿದಿದ್ದು ವಿಶೇಷ ಸಂದೇಶ ರವಾನಿಸಿದ್ದಾರೆ.
Discussion about this post