ನವದೆಹಲಿ: ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಕೋವಿಡ್ ಮುಕ್ತ ಗ್ರಾಮಕ್ಕೆ ಬರೋಬ್ಬರಿ 50 ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಲಾಗಿದೆ.
ಒಮಿಕ್ರಾನ್ ರೂಪಾಂತರಿಯನ್ನು ತಡೆಗಟ್ಟುವ ಸಲುವಾಗಿ ಜನವರಿ 10ರಿಂದ ಕೋವಿಡ್ ಮುಕ್ತ ಗ್ರಾಮ ನಿರ್ಮಾಣದ ಸ್ಪರ್ಧೆಯೊಂದನ್ನ ಆರಂಭಿಸಲಾಗಿದೆ.
ಈ ಸ್ಪರ್ಧೆಯು ಮಾರ್ಚ್ 15ರವರೆಗೆ ನಡೆಯಲಿದೆ. ಮೊದಲ ಸ್ಥಾನ ಪಡೆದ ಗ್ರಾಮಕ್ಕೆ 50 ಲಕ್ಷ ರೂಪಾಯಿ, 2ನೇ ಸ್ಥಾನ ಪಡೆದ ಗ್ರಾಮಕ್ಕೆ 25 ಲಕ್ಷ ರೂಪಾಯಿ ಹಾಗೂ ಮೂರನೇ ಸ್ಥಾನ ಪಡೆದ ಗ್ರಾಮಕ್ಕೆ 15 ಲಕ್ಷ ರೂಪಾಯಿ ಸಿಗಲಿದೆ.
ನಮ್ಮ ಜಿಲ್ಲೆಯ ಗ್ರಾಮೀಣ ಪ್ರದೇಶಗಳು ಕೊರೊನಾ ಮುಕ್ತವಾಗಬೇಕು ಅನ್ನೋದು ನಮ್ಮ ಉದ್ದೇಶ. ಕೊರೊನಾ ವಿರುದ್ಧದ ಹೋರಾಟದಲ್ಲಿ ಶ್ರಮಿಸುತ್ತಿರುವ ವೈದ್ಯಾಧಿಕಾರಿಗಳು, ಆರೋಗ್ಯ ಕಾರ್ಯಕರ್ತರು ಹಾಗೂ ಸ್ವಯಂಸೇವಕರನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಸ್ಪರ್ಧೆಯನ್ನ ಆಯೋಜನೆ ಮಾಡುತ್ತಿದ್ದೇವೆ ಎಂದು ಪುಣೆ ಜಿಲ್ಲೆಯ ಸಿಇಓ ಆಯುಷ್ ಪ್ರಸಾದ್ ತಿಳಿಸಿದ್ದಾರೆ.
Discussion about this post