ರಾಮನಗರ: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಇನ್ನೇನು ಕೆಲವೇ ಹೊತ್ತಿನಲ್ಲಿ ಚಾಲನೆ ಸಿಗಲಿದೆ. ಈ ಹಿನ್ನೆಲೆಯಲ್ಲಿ ವಿವಿಧ ಪೂಜಾ ಕಾರ್ಯಗಳು ನಡೆಯುತ್ತಿವೆ.
ಈ ಹಿನ್ನೆಲೆಯಲ್ಲಿ ನದಿಯಲ್ಲಿ ಸ್ನಾನ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವುಮಾರ್, ಜಿಲ್ಲೆಯ ಕನಕಪುರ ತಾಲೂಕಿನ ಸಂಗಮದಲ್ಲಿ ಗಂಗಾ ಪೂಜೆ ನೆರವೇರಿಸಿದರು.
ನಂತರ ವಿವಿಧ ಪೂಜಾ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಕೆಲವೇ ಹೊತ್ತಲ್ಲಿ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ನ ಮಹತ್ವದ 10 ದಿನಗಳ ಪಾದಯಾತ್ರೆಗೆ ಚಾಲನೆ ಸಿಗಲಿದೆ.
ಕಾಂಗ್ರೆಸ್ ಹಿರಿಯ ಶಾಸಕರು ಮತ್ತು ಚಿತ್ರರಂಗದ ಗಣ್ಯರು ಈ ಪಾದಯಾತ್ರೆಯಲ್ಲಿ ಭಾಗಿ ಆಗಲಿದ್ದಾರೆ. ಇಂದು 15 ಕಿಲೋ ಮೀಟರ್ ಪಾದಯಾತ್ರೆ ನಡೆಯಲಿದೆ.
Discussion about this post