ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿದ್ದ, ಪಾದಯಾತ್ರೆಗೆ ಬ್ರೇಕ್ ಬಿದ್ದಿದೆ. ಸರ್ಕಾರದ ಆದೇಶ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಇಂದು ಪಾದಯಾತ್ರೆಯನ್ನ ರದ್ದು ಮಾಡುವ ನಿರ್ಧಾರವನ್ನ ತೆಗೆದುಕೊಂಡಿದ್ದಾರೆ.
ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಬೆಳಗ್ಗೆ ರಾಮನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು.
ಈ ಪಾದಯಾತ್ರೆಯನ್ನು ಮೊಟಕುಗೊಳಿಸಲು ನಿರ್ಧರಿಸಿದ್ದಾರೆ. ಪಾದಯಾತ್ರೆ ಮೂಲಕ ಬೆಂಗಳೂರಿನ ಕಡೆ ಹೋದರೆ ಕೊರೊನಾ ಸೋಂಕು ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಹೀಗಾಗಿ ರಾಮನಗರದಲ್ಲೇ ಪಾದಯಾತ್ರೆ ಮೊಟಕುಗೊಳಿಸಲು ನಿರ್ಧರಿಸಿದ್ದಾರೆ.=
Discussion about this post