ಜುಲೈ 19ರಂದು ದಸರಾ ಉನ್ನತ ಮಟ್ಟದ ಸಭೆ ನಡೆಯಲಿದ್ದು, ಈ ಬಾರಿ ಅದ್ಧೂರಿ ದಸರಾ ಆಚರಣೆ ಬಗ್ಗೆ ಸಭೆಯಲ್ಲೇ ನಿರ್ಧರಿಸಲಾಗುತ್ತೆ ಎಂದು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮಾಹಿತಿ ನೀಡಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ದಸರಾ ಹೈಪವರ್ ಕಮಿಟಿ ಮೀಟಿಂಗ್ ನಡೆಯಲಿದ್ದು, ದಸರಾ ಆಚರಣೆ, ಆನೆಗಳ ಆಯ್ಕೆ ಸೇರಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಗುತ್ತೆ. ಸಭೆಯಲ್ಲಿ ಮೈಸೂರು ಭಾಗದ ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳು ಭಾಗಿಯಾಗಲಿದ್ದಾರೆ ಎಂದರು.
Discussion about this post