ಐಪಿಎಲ್ 15ನೇ ಆವೃತ್ತಿಗೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಏಪ್ರಿಲ್ ತಿಂಗಳಿನಲ್ಲಿ ಆರಂಭವಾಗಲಿರುವ ಈ ಮೆಗಾ ಟೂರ್ನಿಗೆ ತಂಡಗಳು ಭರ್ಜರಿ ಸಿದ್ಧತೆಯನ್ನು ನಡೆಸಿವೆ. ಅದರ ಭಾಗವಾಗಿ ಇದೇ ತಿಂಗಳ 12 ಮತ್ತು 13 ರಂದು ಆಟಗಾರರ ಹರಾಜು ಪ್ರಕ್ರಿಯೇ ಆರಂಭವಾಗಲಿದೆ.
ಈ ಹರಾಜಿನಲ್ಲಿ ಈ ಒಬ್ಬ ಆಟಗಾರನ ಮೇಲೆ ಹಣದ ಹೊಳೆಯೇ ಹರಿಯಲಿದೆ ಎಂದು ಟೀಂ ಇಂಡಿಯಾದ ಮಾಜಿ ಆಟಗಾರರೊಬ್ಬರು ಭವಿಷ್ಯ ನುಡಿದಿದ್ದಾರೆ..
ಬೆಂಗಳೂರಿನಲ್ಲಿ ನಡೆಯಲಿರುವ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ವಿಶ್ವದ ಹಲವಾರು ದೇಶಗಳ 1214 ಕ್ರಿಕೆಟಿಗರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದರು. ಈ ಆಟಗಾರರ ಪೈಕಿ ಒಟ್ಟು 590 ಆಟಗಾರರನ್ನು ಅಂತಿಮವಾಗಿ ಬಿಸಿಸಿಐ ಆಯ್ಕೆ ಮಾಡಿದೆ. ಈ ಪೈಕಿ ಶ್ರೇಯಸ್ ಅಯ್ಯರ್ ಮೇಲೆ ಹರಾಜಿನಲ್ಲಿ ಹಣದ ಹೊಳೆಯೇ ಹರಿಯಲಿದೆ ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ.
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಹರಾಜಿನಲ್ಲಿ ಶ್ರೇಯಸ್ ಅಯ್ಯರ್ ಅತಿ ದೊಡ್ಡ ಮೊತ್ತಕ್ಕೆ ಬಿಕರಿಯಾಗುತ್ತಾರೆ . ಅವರನ್ನು ಖರೀದಿಸಲು ಫ್ರಾಂಚೈಸಿಗಳು ತಾ ಮುಂದು ತಾ ಮುಂದು ಎಂದು ಸೆಣಸಾಡಲಿವೆ ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ. ಜೊತೆಗೆ ಅವರನ್ನು ಖರೀದಿಸಿ ತಂಡದ ಕ್ಯಾಪ್ಟನ್ ಮಾಡಲು ಸಾಕಷ್ಟು ತಂಡಗಳು ಪ್ಲಾನ್ ಮಾಡಿಕೊಂಡಿವೆ ಎಂದು ಮಾಜಿ ಆಟಗಾರ ಹೇಳಿದ್ದಾರೆ.
Discussion about this post