ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಕ್ಷೀಣಿಸುತ್ತಿದೆ ಅಂತಾ ವೈದ್ಯೆ ಡಾ.ಪ್ರತಿತ್ ಸಮ್ದಾನಿ ತಿಳಿಸಿದ್ದಾರೆ. ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದೀಗ ಆಸ್ಪತ್ರೆಗಳ ಮೂಲಗಳು ತಿಳಿಸಿರುವ ಪ್ರಕಾರ, ಅವರ ಆರೋಗ್ಯ ಮತ್ತಷ್ಟು ಹದಗೆಡುತ್ತಿದೆ. ಮತ್ತೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೆಂಟಿಲೇಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
92 ವರ್ಷದ ಲತಾ ಮಂಗೇಶ್ಕರ್ಗೆ ಜನವರಿ 8 ರಂದು ಕೊರೊನಾ ದೃಢಪಟ್ಟಿತ್ತು. ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಾ. ಪ್ರತಿತ್ ಸಮ್ದಾನಿ ನೇತೃತ್ವದ ವೈದ್ಯರ ತಂಡ ಹಿರಿಯ ಗಾಯಕಿಗೆ ಚಿಕಿತ್ಸೆ ನೀಡುತ್ತಿದೆ.
Discussion about this post