ಚಿತ್ರದುರ್ಗ: ಕೌಟುಂಬಿಕ ಕಾರಣಕ್ಕೆ ಅತ್ತೆ-ಸೊಸೆ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರೋ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿಯಲ್ಲಿ ನಡೆದಿದೆ.
ರುದ್ರಮ್ಮ(60) ಹತ್ಯೆಗೀಡಾದ ದುರ್ದೈವಿಯಾಗಿದ್ದು, ಆರೋಪಿ ಸೊಸೆ ಮುದ್ದಕ್ಕ (38)ಗಳನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ.
ಮೃತರುದ್ರಮ್ಮ ರಾತ್ರಿ ಮಲಗಿದ್ದ ವೇಳೆಯಲ್ಲಿ ಸೊಸೆ ಮುದ್ದಕ್ಕೆ ಸುತ್ತಿಗೆಯಿಂದ ಅತ್ತೆಯ ತಲೆಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದಾಳೆ ಎನ್ನಲಾಗಿದೆ. ಅತ್ತೆ-ಸೊಸೆ ನಡುವೆ ಹೊಂದಾಣಿಕೆ ಇಲ್ಲದ ಕಾರಣ ಆರಂಭದಿಂದಲೂ ನಿರಂತರ ಜಗಳ ನಡೆಯುತ್ತಿತ್ತಂತೆ. ಇದೇ ಕಾರಣಕ್ಕೆ ಅತ್ತೆ ಮೇಲೆ ದ್ವೇಷ ಬೆಳೆಸಿಕೊಂಡಿದ್ದ ಸೊಸೆ ದುಷ್ಕೃತ್ಯ ನಡೆಸಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Discussion about this post