ದೇಶದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರಿದಿದೆ. ಪ್ರತಿನಿತ್ಯ ಹತ್ತಾರು ಸಾವಿರಗಟ್ಟಲೇ ಕೊರೋನಾ ಕೇಸ್ ಪತ್ತೆಯಾಗುತ್ತಿವೆ. ಇಂತಹ ಹೊತ್ತಲೇ ಕೇಂದ್ರ ಚುನಾವಣಾ ಆಯೋಗ ಪಂಚರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡದ ವಿಧಾನಸಭಾ ಚುನಾವಣೆಯೂ 7 ಹಂತಗಳಲ್ಲಿ ನಡೆಯಲಿದೆ.
ಫೆಬ್ರವರಿ 10ನೇ ತಾರೀಕಿನಿಂದ ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ. ಹಾಗೆಯೇ ಮಾರ್ಚ್ 10ನೇ ತಾರೀಕು ಫಲಿತಾಂಶ ಹೊರ ಬೀಳಲಿದೆ ಎಂದು ತಿಳಿಸಿದೆ.
ದೇಶದಲ್ಲೇ ಅತೋ ದೊಡ್ಡ ರಾಜ್ಯ ಉತ್ತರ ಪ್ರದೇಶ 403 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ. ಗೋವಾ (40), ಪಂಜಾಬ್ (117), ಉತ್ತರಾಖಂಡ (70), ಮಣಿಪುರ (60) ರಾಜ್ಯಗಳ ವಿಧಾನಸಭೆ ಚುನಾವಣೆಯೂ ಹಲವು ಹಂತಗಳಲ್ಲಿ ನಡೆಯಲಿದೆ.
ಪಂಚರಾಜ್ಯ ಚುನಾವಣೆ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಮುಖ್ಯ ಆಯುಕ್ತ ಸುಶೀಲ್ ಚಂದ್ರ ಅವರು, ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ಎಲೆಕ್ಷನ್ ನಡೆಸುತ್ತೇವೆ ಎಂದರು. ಐದು ರಾಜ್ಯಗಳ 690 ಕ್ಷೇತ್ರಗಳಿಗೆ ಚುನಾವಣೆ ನಡೆಲಿದೆ. ಸಮಯಕ್ಕೆ ಸರಿಯಾಗಿ ಚುನಾವಣೆ ನಡೆಸುವುದು ಕರ್ತವ್ಯ. ಕೊರೊನಾ ಕಾರಣದಿಂದ ಚುನಾವಣೆ ನಡೆಸುವುದು ಸವಾಲಾಗಿದೆ ಎಂದು ಹೇಳಿದರು.
ಕಠಿಣ ಪರಿಸ್ಥಿತಿಯಲ್ಲೂ ಚುನಾವಣೆ ನಡೆಸುವುದು ನಮ್ಮ ಕರ್ತವ್ಯ. ಮುನ್ನೆಚ್ಚರಿಕೆ ನಿಯಮಗಳೊಂದಿಗೆ ಚುನಾವಣೆ ನಡೆಸಲು ತೀರ್ಮಾನಿಸಿದೆ. ಕೊವೀಡ್ ಸೇಫ್ ಎಲೆಕ್ಷನ್ ನಡೆಸಲಾಗುವುದು. ಹೆಚ್ಚು ಜನರು ಮತದಾನದಲ್ಲಿ ಭಾಗುಯಾವಂತೆ ಮಾಡಲಾಗುವುದು. ಈಗಾಗಲೇ ಸಾಕಷ್ಟು ಸಭೆಗಳನ್ನು ನಡೆಸಲಾಗಿದೆ. ಗೃಹ ಇಲಾಖೆ, ಆರೋಗ್ಯ ಇಲಾಖೆ, ರಾಜಕೀಯ ಪಕ್ಷಗಳ ಜೊತೆಗೆ ಸಭೆ ನಡೆಸಿದೆ.
ರಾಜ್ಯ ಸರ್ಕಾರದ ಹಲವು ಅಧಿಕಾರಿಗಳ ಜೊತೆಗೆ ಸಭೆ ನಡೆದಿದೆ. ಅವರಿಂದ ಹಲವು ಸಲಹೆಗಳನ್ನು ಪಡೆಯಲಾಗಿದೆ ಎಂದರು.
ಐದು ರಾಜ್ಯಗಳಲ್ಲಿ ಈ ಬಾರಿ 24.5 ಲಕ್ಷ ಹೊಸ ಮತದಾರರು ಹೆಸರು ನೊಂದಾಯಿಸಿಕೊಂಡಿದ್ದಾರೆ. ಎಲ್ಲ ಮತದಾನ ಕೇಂದ್ರಗಳಲ್ಲಿ ಎಲ್ಲ ರೀತಿಯ ಮೂಲ ಸೌಕರ್ಯಗಳಿಗೆ ಆದ್ಯತೆ ನೀಡಲಾಗುತ್ತಿದೆ. ಕೆಳ ಮಹಡಿಯಲ್ಲಿ ಮತದಾನ ಕೇಂದ್ರಗಳಿರಲಿದೆ. ಸ್ಯಾಜಿಟೈಜರ್ ವ್ಯವಸ್ಥೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಮತದಾನ ಕೇಂದ್ರಗಳಿಗೆ ಜನರ ಸಂಖ್ಯೆ ಇಳಿಕೆ ಮಾಡಿದೆ. 1500 ರಿಂದ 1250ಕ್ಕೆ ಇಳಿಕೆ ಮಾಡಿದೆ. ಜನಸಂದಣಿ ತಡೆಯಲು ಹೆಚ್ಚು ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಅಭ್ಯರ್ಥಿಗಳು ಆನ್ಲೈನ್ ನಾಮಪತ್ರ ಸಲ್ಲಿಕೆ ಮಾಡಬಹುದು. ಕೊವೀಡ್ ರೋಗಿಗಳು ಅಂಚೆ ಮತದಾನ ಮಾಡಬಹುದು. ಐದು ರಾಜ್ಯಗಳಲ್ಲಿ ಒಂದು ಲಕ್ಷಕ್ಕೂ ಅಧಿಕ ಮತದಾನ ಕೇಂದ್ರಗಳಿರಲಿದೆ. ಕೇಂದ್ರದಿಂದ 900 ಚುನಾವಣಾ ವೀಕ್ಷಕರು ಇರಲಿದ್ದಾರೆ. 25 ಲಕ್ಷದಿಂದ 40ಕ್ಕೆ ಚುನಾವಣಾ ವೆಚ್ಚ ಏರಿಕೆ ಮಾಡಲಾಗಿದೆ ಎಂದು ತಿಳಿಸಿದರು.
ತಕ್ಷಣದಿಂದಲೆ ಪಂಚರಾಜ್ಯಗಳಲ್ಲಿ ನೀತಿ ಸಂಹಿತೆ ಜಾರಿಯಾಗಲಿದೆ. ಕ್ರಿಮಿನಲ್ ಹಿನ್ನಲೆ ಹೊಂದಿರುವ ಅಭ್ಯರ್ಥಿಗಳ ಮಾಹಿತಿ ಪ್ರಕಟಿಸಬೇಕು. ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಕ್ಕೆ ಕಾರಣಗಳನ್ನು ತಿಳಿಸಬೇಕು. ಜನರಿಗೆ ಅಭ್ಯರ್ಥಿಗಳ ಮಾಹಿತಿ ನೀಡಬೇಕು. ಡಬಲ್ ಡೋಸ್ ವ್ಯಾಕ್ಸಿನ್ ಆದ ಸಿಬ್ಬಂದಿಗೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. ಈ ಸಿಬ್ಬಂದಿಗಳನ್ನು ಕೊವೀಡ್ ವಾರಿಯರ್ಸ್ ಎಂದು ಘೋಷಿಸಲಾಗಿದೆ. ಹೀಗಾಗಿ ಅವಶ್ಯಕತೆ ಇದ್ದವರಿಗೆ ಬೂಸ್ಟರ್ ಡೋಸ್ ನೀಡಲಾಗುವುದು ಎಂದರು.
Discussion about this post