ಇಂದು 62ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರೋ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.
ಟ್ವಿಟರ್ ಮೂಲಕ ಸಿಎಂ ಬೊಮ್ಮಾಯಿಗೆ ವಿಶ್ ಮಾಡಿದ ಪ್ರಧಾನಿ ಮೋದಿ ‘ಬೊಮ್ಮಾಯಿ ಅವರು ರಾಜ್ಯದ ಬೆಳವಣಿಗೆಗೆ ಒಳ್ಳೆಯ ಆಡಳಿತ ನೀಡುವ ಮೂಲಕ ಸಾಕಷ್ಟು ಶ್ರಮಿಸುತ್ತಿದ್ದಾರೆ.
ಆ ಮೂಲಕ ನಾಡಿನ ಬೆಳವಣಿಗೆಯ ಪಥವನ್ನು ಹೆಚ್ಚಿಸುತ್ತಾ ಬಡವರ, ಶ್ರಮಿಕರ ಏಳಿಗೆಗಾಗಿ ಯತ್ನಿಸುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಮತ್ತು ದೇವರು ಅವರಿಗೆ ಉತ್ತಮ, ಆರೋಗ್ಯ, ದೀರ್ಘಾಯುಷ್ಯವನ್ನು ನೀಡಲಿ ಎಂದು ಕೋರುತ್ತೆನೆ’ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ಟ್ವೀಟ್ಗೆ ಪ್ರತಿಕ್ರಿಯಿಸಿದ ಅವರು ನಿಮ್ಮ ಮಾರ್ಗದರ್ಶನ ಮತ್ತು ಸಹಕಾರದೊಂದಿಗೆ ನಾನು ರಾಜ್ಯದಲ್ಲಿ ಉತ್ತಮ ಆಡಳಿತ ನೀಡಲು ಸಾಧ್ಯವಾಗುತ್ತಿದೆ. ಆ ಮೂಲಕ ಬಡವರ, ಶ್ರಮಿಕರ, ದೀನದಲಿತರ ಏಳಿಗೆಗಾಗಿ ಶ್ರಮಿಸುತ್ತಿದ್ದೇನೆ. ನನ್ನ ಈ ಕೆಲಸಗಳಿಗೆ ಸ್ಫೂರ್ತಿ ನೀವು, ಧನ್ಯವಾದಗಳು ಎಂದಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಅಬ್ಬರ ಹಿನ್ನೆಲೆ ಹುಟ್ಟುಹಬ್ಬವನ್ನು ಆಚರಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ. ಇದೇ ವೇಳೆ ಬೊಮ್ಮಾಯಿ ಸಿಎಂ ಪಟ್ಟ ಅಲಂಕರಿಸಿ ಇಂದಿಗೆ 6 ತಿಂಗಳ ಹಿನ್ನೆಲೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
Best wishes to Karnataka’s CM Shri @BSBommai Ji on his birthday. He is making outstanding efforts to boost Karnataka’s growth trajectory and ensure a life of dignity as well as prosperity for the poor. Praying for his long and healthy life.
— Narendra Modi (@narendramodi) January 28, 2022
Discussion about this post