ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ‘ನನ್ನಮ್ಮ ಸೂಪರ್ ಸ್ಟಾರ್’ ರಿಯಾಲಿಟಿ ಶೋ ಸ್ಪರ್ಧಿ ಸಮನ್ವಿ (6) ನಿನ್ನೆ ಸಾವನ್ನಪ್ಪಿದ್ದಾರೆ. ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ದುರ್ಘಟನೆ ನಡೆದಿತ್ತು.
ಈ ಸಂಬಂಧ ಟಿಪ್ಪರ್ ಚಾಲಕನನ್ನ ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಂಚೇಗೌಡ ಬಂಧಿತ ಟಿಪ್ಪರ್ ಚಾಲಕ. ಸದ್ಯ ಬಂಧನಕ್ಕೆ ಒಳಗಾಗಿರುವ ಟಿಪ್ಪರ್ ಚಾಲಕನನ್ನ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ವಿಚಾರಣೆ ವೇಳೆ ಆಟೋ ಹಿಂದಿಕ್ಕುವ ಭರದಲ್ಲಿ ಸ್ಕೂಟರ್ಗೆ ಡಿಕ್ಕಿ ಹೊಡೆದಿದ್ದಾಗಿ ಹೇಳಿಕೆ ನೀಡಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ.
Discussion about this post