ಸೇನಾ ವಿಮಾನವೊಂದು ತಾಂತ್ರಿಕ ದೋಷದಿಂದಾಗಿ ಪತನಗೊಂಡಿದ್ದು ಅದೃಷ್ಟವಶಾತ್ ಇಬ್ಬರು ತರಬೇತು ಪೈಲಟ್‌ಗಳು ಬಚಾವ್ ಆಗಿದ್ದಾರೆ.
ಗಯಾದಲ್ಲಿರುವ ಇಂಡಿಯನ್ ಆರ್ಮಿ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಿಂದ ಇಬ್ಬರು ಟ್ರೈನಿ ಪೈಲಟ್‌ಗಳನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಟೇಕಾಫ್ ಆದ ಕೆಲವೇ ಸಮಯದಲ್ಲಿ ಪತನಗೊಂಡಿದೆ.
ಆದರೂ ಇಬ್ಬರು ಪೈಲಟ್‌ಗಳು ಸುರಕ್ಷಿತವಾಗಿದ್ದಾರೆ ಎಂದು ಗಯಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ದೇಶಕ ಬಂಗಜಿತ್ ತಿಳಿಸಿದ್ದಾರೆ.
ವಿಮಾನ ಪತನಗೊಂಡಿರೋದನ್ನ ಸ್ಥಳೀಯರು ಗಮನಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿ ಪೈಲಟ್ ರಕ್ಷಣೆ ಮಾಡಿದ್ದಾರೆ. ತಾಂತ್ರಿಕ ದೋಷದಿಂದ ವಿಮಾನ ಪತನಗೊಂಡಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ತಜ್ಞರ ತನಿಖೆ ಬಳಿಕ ಸಂಪೂರ್ಣ ಮಾಹಿತಿ ಸಿಗಲಿದೆ ಎಂದು ಏರ್ಪೋರ್ಟ್ ಡೈರೆಕ್ಟರ್ ತಿಳಿಸಿದ್ದಾರೆ.
Discussion about this post