ಜಾರ್ಖಂಡ್ನ ಧನ್‌ಬಾದ್ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ವೇಳೆ ಮೂರು ಕಲ್ಲಿದ್ದಲು ಗಣಿಗಳು ಕುಸಿದು ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಣಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್‌ನ ಗೋಪಿನಾಥಪುರ ಓಪನ್ ಕಾಸ್ಟ್ ಪ್ರಾಜೆಕ್ಟ್‌ನಿಂದ ಕಲ್ಲಿದ್ದಲು ಕಂಪನಿಗಳಿಂದ ನೇಮಕಗೊಂಡ ರಕ್ಷಣಾ ತಂಡವು ಮೂವರು ಮಹಿಳೆಯರು ಮತ್ತು ಓರ್ವ ಹುಡುಗಿಯ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಧನ್‌ಬಾದ್‌ನ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಪ್ರೇಮ್ ಕುಮಾರ್ ತಿವಾರಿ ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿರುವ ತಿವಾರಿ, ಕಲ್ಲಿದ್ದಲು ಗಣಿಯಲ್ಲಿ ಸಿಕ್ಕಿಕೊಂಡಿರುವ ಇತರರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಹೇಳಿದರು. ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಟ್ವೀಟ್‌ನಲ್ಲಿ, ಧನ್‌ಬಾದ್‌ನ ನಿರ್ಸಾದಲ್ಲಿರುವ ಕಲ್ಲಿದ್ದಲು ಗಣಿಯಿಂದ ಕೆಲವು ಸಾವು-ನೋವುಗಳು ವರದಿಯಾಗಿವೆ. ಜಿಲ್ಲಾಡಳಿತವು ರಕ್ಷಣಾ ಮತ್ತು ಪರಿಹಾರ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ದೇವರು ಅಗಲಿದ ಆತ್ಮಕ್ಕೆ ಶಾಂತಿ ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ
Discussion about this post